alex Certify ಜುಲೈನಲ್ಲಿ NEET – JEE ಪರೀಕ್ಷೆ ನಡೆಯುವುದು ಅನುಮಾನ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈನಲ್ಲಿ NEET – JEE ಪರೀಕ್ಷೆ ನಡೆಯುವುದು ಅನುಮಾನ…!

NEET 2020 Postponed : ಕೊರೊನಾ ವೈರಸ್ ಭೀತಿ ...

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಸಾರ್ವಜನಿಕರ ಬದುಕನ್ನು ಮಾತ್ರವಲ್ಲ ವಿದ್ಯಾರ್ಥಿಗಳ ಭವಿಷ್ಯವನ್ನೂ ಮುಸುಕಾಗಿಸಿದೆ. ಕೊರೊನಾ ಕಾರಣಕ್ಕೆ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ -ಕಾಲೇಜುಗಳು ಬಂದ್ ಆಗಿದ್ದು, ಯಾವಾಗ ಶುರುವಾಗಲಿದೆ ಎಂಬುದರ ಕುರಿತು ಯಾರ ಬಳಿಯೂ ಖಚಿತತೆಯಿಲ್ಲ.

ಇದರ ಮಧ್ಯೆ ಮುಂದೂಡಿಕೆಯಾಗಿದ್ದ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಆದರೆ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಜುಲೈನಲ್ಲಿ ನಿಗದಿಯಾಗಿದ್ದ ನೀಟ್ ಮತ್ತು ಜೆಇಇ ಪರೀಕ್ಷೆಗಳು ನಡೆಯುವುದು ಅನುಮಾನ ಎಂದು ಹೇಳಲಾಗಿದೆ.

ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶಕ್ಕೆ ನಡೆಸಲಾಗುವ ಈ ಎರಡು ಪರೀಕ್ಷೆಗಳನ್ನು ಸದ್ಯದ ಪರಿಸ್ಥಿತಿಯಲ್ಲಿ ನಡೆಸುವುದು ಬೇಡ ಎಂಬ ನಿರ್ಧಾರಕ್ಕೆ ಶಿಕ್ಷಣ ಸಚಿವಾಲಯ ಬಂದಿದೆ ಎನ್ನಲಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಸರ್ಕಾರದ ಮೊದಲ ಆದ್ಯತೆ ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...