ಬೆಂಗಳೂರು: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಜುಲೈ ಮೊದಲ ವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇಂಗ್ಲಿಷ್ ಹಾಗೂ ಬಾಕಿ ಉಳಿದ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಿಸಿ ಫಲಿತಾಂಶ ಪ್ರಕಟಿಸಲಾಗುವುದು.
ಇಂಗ್ಲಿಷ್ ಪರೀಕ್ಷೆಗೆ ಸುಮಾರು 27 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು ಮತ್ತೊಂದು ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.