ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್ ರೀತಿ ಕೆಲಸ ಮಾಡಿದ್ದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನನ್ನ ಪ್ರಕಾರ ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಜೆಡಿಎಸ್ ನಾಯಕರು ಅವಕಾಶವಾದಿ ರಾಜಕಾರಣಿಗಳು, ಜೆಡಿಎಸ್ ನಾಟ್ ಎ ಪೊಲಿಟಿಕಲ್ ಪಾರ್ಟಿ. ಆ ಪಕ್ಷದ ಜೊತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್ ನಂತೆ ಕೆಲಸ ಮಾಡಿದ್ದೆ; ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ
ಇನ್ನು ನಾಳೆ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿದ ಅವರು, ಬಜೆಟ್ ಬಗ್ಗೆ ಯಾವ ನಿರೀಕ್ಷೆಯೂ ಇಲ್ಲ. ಆರ್ಥಿಕ ಸರ್ವೆ ಬಗ್ಗೆಯೂ ಅವರು ಸುಳ್ಳು ಹೇಳುತ್ತಾರೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಜಿಡಿಪಿ ಪಾತಾಳಕ್ಕೆ ಕುಸಿದಿದೆ. ಕೊರೊನಾದಂತಹ ಕಠಿಣ ಸಂದರ್ಭದಲ್ಲೂ 4.2ರಷ್ಟಿದ್ದ ಜಿಡಿಪಿ ಈಗ -7.7 ಇದೆ. ಆದರೆ ಕೇಂದ್ರ ಸರ್ಕಾರ ದೇಶದ ಜನತೆಗೆ ತಪ್ಪು ಮಾಹಿತಿ ನಿಡುತ್ತಿದೆ. ಇನ್ನು ನಿರುದ್ಯೋಗ ಸಮಸ್ಯೆ ದೇಶಾದ್ಯಂತ ಹೆಚ್ಚುತ್ತಿದೆ ಎಂದು ವಾಗ್ದಾಳಿ ನಡೆಸಿದರು.