alex Certify ಜ್ಯೋತಿಷಿಗಳ ಮಾತು ಬಿಟ್ಟು ಜನರ ನಾಡಿಮಿಡಿತ ಅರಿತಿದ್ದರೆ ಕಾಂಗ್ರೆಸ್ ಗೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ್ಯೋತಿಷಿಗಳ ಮಾತು ಬಿಟ್ಟು ಜನರ ನಾಡಿಮಿಡಿತ ಅರಿತಿದ್ದರೆ ಕಾಂಗ್ರೆಸ್ ಗೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದ ಸಚಿವ

ಬೆಂಗಳೂರು: ಜ್ಯೋತಿಷಿಗಳ ಮಾತು ಕೇಳಿ ಅಭ್ಯರ್ಥಿಯನ್ನು ನಿಲ್ಲಿಸುವ ಬದಲು ಜನರ ನಾಡಿಮಿಡಿತ ಅರಿತು ಅಭ್ಯರ್ಥಿ ಹಾಕಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಇಷ್ಟು ಹೀನಾಯ ಸೋಲು ಅನುಭವಿಸುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಲೇವಡಿ ಮಾಡಿದ್ದಾರೆ.

ಆರ್.ಆರ್.ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಮುನಿರತ್ನ ಹಾಗೂ ರಾಜೇಶ್ ಗೌಡ ಗೆಲುವು ಸಾಧಿಸಿರುವುದು ಸಂತಸ ತಂದಿದೆ. ಮುನಿರತ್ನ ಅವರ ಜನಪರ ಕಾರ್ಯಗಳು ಆರ್.ಆರ್.ನಗರದ ಜನತೆಯ ಮನ ಗೆದ್ದಿದ್ದು ಹ್ಯಾಟ್ರಿಕ್ ಗೆಲುವು ನೀಡುವ ಮೂಲಕ ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ. ಮುನಿರತ್ನಗೆ ಅಭಿನಂದನೆಗಳು ಎಂದಿದ್ದಾರೆ.

ಅಲ್ಲದೇ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರಿಗೂ ಅಭಿನಂದನೆ. ಎರಡೂ ಕ್ಷೇತ್ರಗಳಲ್ಲೂ ಪಕ್ಷದ ಗೆಲುವಿಗಾಗಿ ಶ್ರಮಿಸಿದ ಬಿಜೆಪಿಯ ಎಲ್ಲಾ ನಾಯಕರು, ಕಾರ್ಯಕರ್ತರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...