ಬೆಂಗಳೂರು: ಜ್ವರವಿರುವುದು ಗೊತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ನಡೆಗೆ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮೂಲಕ ಕಿಡಿಕಾರಿರುವ ಕಾಂಗ್ರೆಸ್, ಕೊರೋನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಬಿ.ಎಸ್.ವೈ. ಹಾಗೂ ಬಿಜೆಪಿಯವರ ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂದು ಹೇಳಿದೆ.
ಕೃಷಿಕರೇ ಗಮನಿಸಿ: ಈ ವರ್ಷದ ಮುಂಗಾರಿನ ಕುರಿತು ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ
ಈ ಹಿಂದೆ ಕೊರೋನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು. ಇಂತಹ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ? ಎಂದು ಕಿಡಿಕಾರಿದೆ.