ರಾಜ್ಯಸಭಾ ಚುನಾವಣೆಗೆ ಕೋರ್ ಕಮಿಟಿ ಸಲ್ಲಿಸಿದ್ದ ಪಟ್ಟಿಯನ್ನು ಸಾರಸಗಟಾಗಿ ಪಕ್ಕಕ್ಕೆ ತಳ್ಳಿರುವ ಬಿಜೆಪಿ ಹೈಕಮಾಂಡ್, ಸಾಮಾನ್ಯ ಕಾರ್ಯಕರ್ತರಾದ ಈರಣ್ಣ ಕಡಾಡಿ ಹಾಗೂ ಅಶೋಕ್ ಬಸ್ತಿ ಅವರಿಗೆ ಟಿಕೆಟ್ ನೀಡಿದೆ.
ಈ ಅನಿರೀಕ್ಷಿತ ಬೆಳವಣಿಗೆ ಬಿಜೆಪಿ ಕಾರ್ಯಕರ್ತರಲ್ಲಿ ಹರ್ಷ ಮೂಡಿಸಿದ್ದರೆ, ವಿಧಾನಪರಿಷತ್ ಚುನಾವಣೆ ಟಿಕೆಟ್ ಆಕಾಂಕ್ಷಿಗಳಾಗಿದ್ದ ಆರ್. ಶಂಕರ್, ಹೆಚ್. ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಅವರಿಗೆ ಆತಂಕ ತರಿಸಿದೆ.
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಇವರುಗಳು ವಿಧಾನಪರಿಷತ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು.
ಆದರೆ ರಾಜ್ಯಸಭೆಯಂತೆ ವಿಧಾನಪರಿಷತ್ ಚುನಾವಣೆಗೂ ಬಿಜೆಪಿ ಹೈಕಮಾಂಡ್ ಸಾಮಾನ್ಯ ಕಾರ್ಯಕರ್ತರಿಗೆ ಮಣೆ ಹಾಕಲಿದೆ ಎಂಬ ವದಂತಿ ಹಿನ್ನಲೆಯಲ್ಲಿ ಬುಧವಾರದಂದು ಮುಖ್ಯಮಂತ್ರಿ ಯಡಿಯೂರಪ್ಪನವರ ನಿವಾಸಕ್ಕೆ ದೌಡಾಯಿಸಿದ್ದ ಎಂಟಿಬಿ ನಾಗರಾಜ್ ಮಾತುಕತೆ ನಡೆಸಿದ್ದಾರೆ.