alex Certify ಡಕಾಯಿತನನ್ನು ಹಿಡಿದು ಕೊರೊನಾಗೆ ತುತ್ತಾದ ಒಂದೇ ಠಾಣೆಯ 12 ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಕಾಯಿತನನ್ನು ಹಿಡಿದು ಕೊರೊನಾಗೆ ತುತ್ತಾದ ಒಂದೇ ಠಾಣೆಯ 12 ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ. ಅದರಲ್ಲೂ ಕೊರೊನಾ ವಾರಿಯರ್‌ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಇದು ಬೆಂಬಿಡದೆ ಕಾಡುತ್ತಿದೆ.

ಇದೀಗ ಬೆಂಗಳೂರಿನ ಎಚ್ಎಎಲ್ ಠಾಣೆಯ ಇನ್ಸ್‌ ಪೆಕ್ಟರ್‌, ಸಬ್‌ ಇನ್ಸ್‌ ಪೆಕ್ಟರ್‌ ಹಾಗೂ 10 ಮಂದಿ ಇತರೆ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ಸದ್ಯ ಇಡೀ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಡಕಾಯತಿ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಬಂಧಿಸಿದ್ದ ಪೊಲೀಸರು, ಆತನ ವಿಚಾರಣೆ ನಡೆಸಿದ ಬಳಿಕ ಅವನಿಗೆ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿತ್ತು. ಹೀಗಾಗಿ ಆರೋಪಿಯ ಸಂಪರ್ಕಕ್ಕೆ ಬಂದಿದ್ದ ಪೊಲೀಸರು ಪರೀಕ್ಷೆಗೆ ಒಳಪಟ್ಟಿದ್ದು, 12 ಮಂದಿ ಪೊಲೀಸರಿಗೆ ಪಾಸಿಟಿವ್ ಆಗಿರುವ ಕಾರಣ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...