alex Certify ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದವರಿಗೆ ಶುರುವಾಯ್ತು ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದವರಿಗೆ ಶುರುವಾಯ್ತು ಆತಂಕ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನೇದಿನೇ ವ್ಯಾಪಕವಾಗುತ್ತಿದ್ದು, ಜನಸಾಮಾನ್ಯರಿಂದ ಹಿಡಿದು ಜನ ಪ್ರತಿನಿಧಿಗಳವರೆಗೆ ಹಬ್ಬುತ್ತಿದೆ. ಕೆಲ ಶಾಸಕರು, ಸಂಸದೆ ಕೂಡ ಸೋಂಕು ಪೀಡಿತರಾಗಿದ್ದು, ಅವರುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕುಣಿಗಲ್ ಕ್ಷೇತ್ರದ ಶಾಸಕ ಡಾ. ರಂಗನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ವಿಚಾರ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಹಾಜರಿದ್ದವರಿಗೆ ಆತಂಕ ತಂದೊಡ್ಡಿದೆ.

ಶಾಸಕ ರಂಗನಾಥ್, ಡಿ.ಕೆ. ಶಿವಕುಮಾರ್ ಅವರ ಸಂಬಂಧಿಯೂ ಆಗಿದ್ದು, ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭದ ಸಿದ್ಧತೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು ಎನ್ನಲಾಗಿದೆ. ಅಲ್ಲದೆ ಅಧಿಕಾರ ಸ್ವೀಕಾರ ಸಮಾರಂಭದ ಮುನ್ನಾ ದಿನ ತಡರಾತ್ರಿಯವರೆಗೂ ಕೆಪಿಸಿಸಿ ಕಛೇರಿಯಲ್ಲಿ ಕಾರ್ಯ ನಿರ್ವಹಿಸಿದ್ದರು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...