ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಕಿಡಿ ಕಾರಿರುವ ಸಚಿವ ಶ್ರೀರಾಮುಲು, ಸಿದ್ದರಾಮಯ್ಯನವರು ಭ್ರಷ್ಟ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು ಎಂದು ಗುಡುಗಿದ್ದಾರೆ.
ಉಪಚುನಾವಣಾ ಪ್ರಚಾರ ಭರಾಟೆ ಜೋರಾಗಿದ್ದು, ರಾಜಕೀಯ ನಾಯಕರ ವಾಕ್ಸಮರವೂ ತಾರಕಕ್ಕೇರಿದೆ. ಮಸ್ಕಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಎಷ್ಟು ಲೂಟಿ ಮಾಡಿದ್ದಾರೆ. ಅವರ ಮೇಲೆ ಎಷ್ಟು ಕೇಸ್ ಗಳಿವೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಅಂತಹ ಭ್ರಷ್ಟನನ್ನು ಪಕ್ಕದಲ್ಲೇ ಕೂರಿಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದರು.
ನೆಟ್ಟಿಗರ ಮನಗೆದ್ದಿದೆ ಚುನಾವಣಾ ಕರ್ತವ್ಯದ ನಡುವೆಯೂ ಮಾನವೀಯತೆ ಮೆರೆದ ಈ ಪೊಲೀಸ್ ಪೇದೆ ಫೋಟೋ
ಕಾಂಗ್ರೆಸ್ ಸರ್ಕಾರ 10 ಪರ್ಸೆಂಟ್ ಸರ್ಕಾರವಾಗಿತ್ತು. ಎಲ್ಲದಕ್ಕೂ 10 ಪರ್ಸೆಟ್ ತೆಗೆದುಕೊಳ್ಳುತ್ತಿದ್ದರು. ಇಂತಹ ಸರ್ಕಾರ ನಡೆಸಿದವರು ಇಂದು ಸಿಎಂ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಬಗ್ಗೆ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯನವರಿಗೆ ಶೋಭೆ ತರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.