alex Certify BIG NEWS: ಡಿಕೆಶಿ ಸಹೋದರ ಡಿ.ಕೆ. ಸುರೇಶ್‌ ಗೂ ಸಿಬಿಐ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಕೆಶಿ ಸಹೋದರ ಡಿ.ಕೆ. ಸುರೇಶ್‌ ಗೂ ಸಿಬಿಐ ಶಾಕ್

ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ 6 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಸದಾಶಿವನಗರ ನಿವಾಸದ ಮೇಲೆ ದಾಳಿ ನಡೆಸಿದ್ದು, ಇದರ ಜೊತೆಗೆ ಸಿಬಿಐ ಅಧಿಕಾರಿಗಳ ಮತ್ತೊಂದು ತಂಡ ಡಿಕೆಶಿ ಸಹೋದರ ಸಂಸದರಾಗಿರುವ ಡಿ.ಕೆ. ಸುರೇಶ್‌ ಅವರ ನಿವಾಸದ ಮೇಲೂ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಡಿ.ಕೆ. ಶಿವಕುಮಾರ್‌ ಹಾಗೂ ಡಿ.ಕೆ. ಸುರೇಶ್‌ ಬಹಳಷ್ಟು ವ್ಯವಹಾರಗಳಲ್ಲಿ ಪಾಲುದಾರಿಕೆ ಹೊಂದಿದ್ದಾರೆನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಇಬ್ಬರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಇಬ್ಬರ ನಿವಾಸಗಳಲ್ಲೂ ದಾಖಲೆ ಪತ್ರಗಳ ಪರಿಶೀಲನೆಯನ್ನು ಸಿಬಿಐ ಅಧಿಕಾರಿಗಳು ನಡೆಸುತ್ತಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನೂ ಹೊರಬೀಳಬೇಕಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...