ನವದೆಹಲಿ: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ತಡೆ ನಿಡಲು ಸರ್ವೋಚ್ಛ ನ್ಯಾಯಾಲಯ ನಿರಾಕರಿಸಿದ್ದು, ತನಿಖೆ ಮುಂದುವರೆಸುವಂತೆ ತಿಳಿಸಿದೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೂ ಸೂಚನೆ ನೀಡಿದೆ.
ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಹೆಚ್.ಡಿ.ಕೆ. ವಿರುದ್ಧ ಸಮನ್ಸ್ ಜಾರಿ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಹೆಚ್.ಡಿ.ಕೆ. ಸುಪ್ರೀಂ ಮೆಟ್ಟಿಲೇರಿದ್ದರು.