alex Certify ಡಿಸಿಎಂ ಗೋವಿಂದ ಕಾರಜೋಳಗೆ ಕೊರೊನಾ: ಹಲವು ಸಚಿವರಲ್ಲಿ ಶುರುವಾಯ್ತು ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸಿಎಂ ಗೋವಿಂದ ಕಾರಜೋಳಗೆ ಕೊರೊನಾ: ಹಲವು ಸಚಿವರಲ್ಲಿ ಶುರುವಾಯ್ತು ಆತಂಕ

ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸ್ವತಃ ಗೋವಿಂದ ಕಾರಜೋಳ ಅವರೇ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ಮೂಲಕ ಈ ಮಾಹಿತಿ ನೀಡಿದ್ದಾರೆ. ಇದರಿಂದ ಗುಣಮುಖನಾಗಿ ಶೀಘ್ರದಲ್ಲೇ ಹೊರಬಂದು ಎಂದಿನಂತೆ ಕಾರ್ಯ ನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ.

ತಮಗೆ ಯಾವುದೇ ರೋಗ ಲಕ್ಷಣಗಳಿಲ್ಲದಿರದಿದ್ದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ಅವರು ಹೇಳಿದ್ದು, ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸುವಂತೆ ಹೇಳಿದ್ದಾರೆ.

ಈ ಮಧ್ಯೆ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಹಲವರಲ್ಲಿ ಆತಂಕ ಮೂಡಿಸಿದೆ. ಗೋವಿಂದ ಕಾರಜೋಳ, ಸಚಿವರುಗಳಾದ ಮಾಧುಸ್ವಾಮಿ, ಸೋಮಣ್ಣ, ಅಶೋಕ್, ಈಶ್ವರಪ್ಪ ಸೇರಿದಂತೆ ಹಲವರ ಜೊತೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಚರ್ಚೆ ನಡೆಸಿದ್ದರೆಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...