ಬೆಂಗಳೂರು: ಶಿರಾ ಹಾಗೂ ಆರ್.ಆರ್. ನಗರ ಉಪ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿವೆ.
ಈ ನಡುವೆ ಆರ್.ಆರ್. ನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ. ರವಿ ಪತ್ನಿಯನ್ನು ಕಣಕ್ಕಿಳಿಸುವ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಆರ್.ಆರ್. ನಗರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಆ ಸಮಿತಿ ಅಭ್ಯರ್ಥಿ ಆಯ್ಕೆ ಬಗ್ಗೆ ಎಲ್ಲರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದೆ ಎಂದರು.
ಡಿ.ಕೆ. ರವಿ ಪತ್ನಿ ಕುಸುಮಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಬಗ್ಗೆ ಕೆಲ ಹಿರಿಯ ನಾಯಕರು, ಮಾಜಿ ಶಾಸಕರು ಪ್ರಸ್ತಾಪ ಮಾಡಿದ್ದಾರೆ. ಡಿ.ಕೆ. ರವಿ ಪತ್ನಿ ನೊಂದ ಹೆಣ್ಣುಮಗಳು. ಅಲ್ಲದೇ ಆರ್.ಆರ್. ನಗರಕ್ಕೆ ಇನ್ನೂ ಆರರಿಂದ ಏಳು ಜನರು ಟಿಕೆಟ್ ಆಕಾಂಕ್ಷಿಗಳಿದ್ದಾರೆ ನೋಡೋಣ. ಈ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ ಎಂದಿದ್ದಾರೆ ಡಿ.ಕೆ. ಶಿವಕುಮಾರ್.