ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಮತ್ತು ಐಂದ್ರಿತಾ ರೇಯವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಸಿಸಿಬಿ ನೋಟೀಸ್ ಮೇರೆಗೆ ಇಂದು ವಿಚಾರಣೆಗೆ ಹಾಜರಾಗಿದ್ದ ಸ್ಟಾರ್ ದಂಪತಿಗಳಾದ ದಿಗಂತ್ ಹಾಗೂ ಐಂದ್ರಿತಾರನ್ನು ಸಿಸಿಬಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ದಿಗಂತ್ ಹಾಗೂ ಐಂದ್ರಿತಾ, ಡ್ರಗ್ಸ್ ಪೆಡ್ಲರ್ ಗಳಿಂದ ಅತಿ ಹೆಚ್ಚು ಬಾರಿ ಸಿಂಥೆಟಿಕ್ ಡ್ರಗ್ ಟ್ಯಾಬ್ಲೆಟ್ ಗಳನ್ನು ಪಡೆದುಕೊಳ್ಳುತ್ತಿದ್ದರು. ಹಲವು ಬಾರಿ ಇಬ್ಬರೂ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದುದನ್ನು ನಾನು ನೋಡಿದ್ದಾಗಿ ಆರೋಪಿ ರವಿಶಂಕರ್ ಸಿಸಿಬಿ ಮುಂದೆ ಬಾಯ್ಬಿಟ್ಟಿದ್ದ. ಇದೇ ಕಾರಣಕ್ಕಾಗಿ ಹೆಚ್ಚಿನ ವಿಚಾರಣೆ ನಡೆಸುವ ನಿಟ್ಟಿನಲ್ಲಿ ಸ್ಟಾರ್ ದಂಪತಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆಯಿದೆ.