alex Certify ಡ್ರಗ್ಸ್ ಕೇಸ್ ನಲ್ಲಿ ದರ್ಶನ್ ಲಮಾಣಿ ಬಂಧನ ಪ್ರಕರಣ; ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಕೇಸ್ ನಲ್ಲಿ ದರ್ಶನ್ ಲಮಾಣಿ ಬಂಧನ ಪ್ರಕರಣ; ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಆರೋಪಿಗಳು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ.

ದರ್ಶನ್ ಲಮಾಣಿ ಬಂಧನದ ವೇಳೆ ಇನ್ನೂ 9 ಆರೋಪಿಗಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು. ಈ 9 ಆರೋಪಿಗಳ ಪೈಕಿ ನಾಲ್ವರು ಆರೋಪಿಗಳು ದರ್ಶನ್ ಲಮಾಣಿ ಸ್ನೇಹಿತರಾಗಿದ್ದಾರೆ. ಇವರೆಲ್ಲರೂ ದರ್ಶನ್ ಗೆ ಮತ್ತೇರಿಸಿ ವ್ಯವಹಾರಕ್ಕೆ ಬಳಸಿಕೊಳ್ಳುತ್ತಿದ್ದರು. ಡ್ರಗ್ಸ್ ವ್ಯವಹಾರ, ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ದರ್ಶನ್ ನನ್ನು ಬಳಸಿಕೊಳ್ಳುತ್ತಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

ಡ್ರಗ್ಸ್ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಗೋವಾಗೆ ಹೋಗಿ ತಲೆಮರೆಸಿಕೊಳ್ಳುತ್ತಿದ್ದ ಆರೋಪಿಗಳು, ಐಷಾರಾಮಿ ಹೋಟೆಲ್ ಗಳಲ್ಲಿ ವಾಸ್ತವ್ಯ ಮಾಡುತ್ತಿದ್ದರು. ಈ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...