alex Certify ಡ್ರಗ್ಸ್ ಪೆಡ್ಲರ್ ಕಿಶೋರ್ ಶೆಟ್ಟಿ ಬೆನ್ನಿಗೆ ನಿಂತ ಕರಾವಳಿ ಶಾಸಕ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಪೆಡ್ಲರ್ ಕಿಶೋರ್ ಶೆಟ್ಟಿ ಬೆನ್ನಿಗೆ ನಿಂತ ಕರಾವಳಿ ಶಾಸಕ…?

ಮಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಂಗಳೂರು ಸಿಸಿಬಿ ವಶದಲ್ಲಿರುವ ನಿರೂಪಕಿ ಅನುಶ್ರೀ ಸ್ನೇಹಿತ ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈ ಬಿಡುವಂತೆ ಕರಾವಳಿ ಶಾಸಕರೊಬ್ಬರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

ಡ್ರಗ್ಸ್ ಪ್ರಕರಣದಲ್ಲಿ ಡಾನ್ಸರ್ ಕಿಶೋರ್ ಶೆಟ್ಟಿ ಬಂಧನವಾದ ದಿನವೇ ಮಂಗಳೂರಿನ ಪ್ರಭಾವಿ ವ್ಯಕ್ತಿಯೊಬ್ಬರು, ಕರಾವಳಿ ಶಾಸಕರ ಮೂಲಕ ಮಂಗಳೂರು ಸಿಸಿಬಿ ಪೊಲೀಸರ ಮೇಲೆ ಒತ್ತಡ ಹಾಕಿಸಿದ್ದರು. ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈ ಬಿಡುವಂತೆ ಹೇಳಿದ್ದರು. ಅಲ್ಲದೇ ಆತನ ವಿರುದ್ಧ ಎಫ್.ಐ.ಆರ್. ದಾಖಲಿಸದಂತೆಯೂ ಸೂಚಿಸಿದ್ದರು.

ಒಂದು ವೇಳೆ ಶಾಸಕರ ಒತ್ತಡಕ್ಕೆ ಮಂಗಳೂರು ಸಿಸಿಬಿ ಪೊಲೀಸರು ಮಣಿದಿದ್ದರೆ ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ಸೇರಿದಂತೆ ಹಲವರ ಹೆಸರು ಹೊರ ಬರುತ್ತಿರಲಿಲ್ಲ ಎನ್ನಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...