ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ, ಸಂಜನಾ ಸೇರಿದಂತೆ ಒಟ್ಟು ಐವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ಎನ್ ಡಿಪಿ ಎಸ್ ವಿಶೇಷ ಕೋರ್ಟ್ ಮುಂದೆ ಬಂದಿತ್ತು. ಆದರೆ ಇಬ್ಬರು ನಟಿಯರು ಸೇರಿದಂತೆ ಐವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿ ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ನಟಿ ಮಣಿಯರಿಗೆ ಇಂದೂ ಕೂಡ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಇನ್ನೂ ಒಂದು ದಿನ ಜೈಲಿನಲ್ಲೇ ಕಳಿಯಬೇಕಾದ ಸ್ಥಿತಿ ಎದುರಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.21ರಂದು ನಡೆಸಿದ್ದ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.