alex Certify ಡ್ರಗ್ಸ್ ಪ್ರಕರಣ: ಪಂಚರಂಗಿ ನಟನಿಗೆ ಮತ್ತೆ ಶಾಕ್ ಕೊಟ್ಟ ಸಿಸಿಬಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಪ್ರಕರಣ: ಪಂಚರಂಗಿ ನಟನಿಗೆ ಮತ್ತೆ ಶಾಕ್ ಕೊಟ್ಟ ಸಿಸಿಬಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟೀಸ್ ನೀಡಿದೆ.

ಪ್ರಕರಣ ಸಂಬಂಧ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿ ಪುನೀತ್, ದಿಗಂತ್ ಅವರಿಗೆ ಕರೆ ಮಾಡಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ನಟ ದಿಗಂತ್ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಸೆ.16ರಂದು ನಟ ದಿಗಂತ್ ಹಾಗೂ ಐಂದ್ರಿತಾ ಸಿಸಿಬಿ ವಿಚಾರಣೆಗೆ ಹಾಜರಾಗಿ ಬಂದಿದ್ದರು. ಈ ವೇಳೆ ಡ್ರಗ್ಸ್ ಪೆಡ್ಲರ್ ಗಳ ಬಗ್ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಅಲ್ಲದೇ 2-3 ದಿನಗಳಲ್ಲಿ ಪೂರಕ ದಾಖಲೆ ಒದಗಿಸುವುದಾಗಿ ತಿಳಿಸಿದ್ದರು. ಆದರೆ ಈವರೆಗೆ ದಾಖಲೆ ಒದಗಿಸಿಲ್ಲ ಎನ್ನಲಾಗಿದೆ.

ಇನ್ನು ಸಿಸಿಬಿ ಎರಡನೇ ಬಾರಿಗೆ ನಟ ದಿಗಂತ್ ಗೆ ಮಾತ್ರ ಇಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಆದರೆ ಪತ್ನಿ ಐಂದ್ರಿತಾಗೆ ಯಾವುದೇ ಬುಲಾವ್ ನೀಡಿಲ್ಲ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...