ಬೆಂಗಳೂರು: ಕಾಟನ್ ಪೇಟೆ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇದೀಗ ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ಭೋಗಿ ಎಂಬಾತನನ್ನು ಸಿಸಿಬಿ ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದು, ವಿಚಾರಣೆಗೆಂದು ಬೆಂಗಳೂರಿಗೆ ಕರೆ ತಂದಿದ್ದಾರೆ.
ಈಗಾಗಲೇ ಕಾಟನ್ ಪೇಟೆ ಡ್ರಗ್ಸ್ ಪ್ರಕರಣ ಸಂಬಂಧ ಹಲವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಇದೇ ಕೇಸ್ ಗೆ ಸಂಬಂಧಿಸಿದಂತೆ ಇತ್ತೀಚೆಗೆ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ರವಿಶಂಕರ್ ನನ್ನು ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಅಶ್ವಿನ್ ಎಂಬಾತನನ್ನು ಬಂಧಿಸಿದೆ.