alex Certify ತಂಬಾಕು ಸೇವಿಸಿ ಕಂಡ ಕಂಡಲ್ಲಿ ಉಗುಳಿದರೆ ಕೇಸ್‌ ಗ್ಯಾರಂಟಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಂಬಾಕು ಸೇವಿಸಿ ಕಂಡ ಕಂಡಲ್ಲಿ ಉಗುಳಿದರೆ ಕೇಸ್‌ ಗ್ಯಾರಂಟಿ…!

ಕೊರೊನಾ ವೈರಸ್ ಹರಡುವಿಕೆ ಹೆಚ್ಚಾದಾಗಿನಿಂದಲೂ ಕಂಡ ಕಂಡಲ್ಲಿ ಉಗುಳುವುದಕ್ಕೆ ನಿಷೇಧ ಹೇರಲಾಗಿತ್ತು. ಆದರೆ ಇದೀಗ ಪಾನ್ ಮಸಾಲ, ತಂಬಾಕು ಉತ್ಪನ್ನಗಳನ್ನು ಜಗಿದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದಕ್ಕೆ ನಿಷೇಧ ಹೇರಲಾಗಿದೆ.

ಸಾರ್ವಜನಿಕರ ಸ್ಥಳಗಳಲ್ಲಿ ಉಗುಳುವುದರಿಂದ ಸೋಂಕು ಹರಡುವಿಕೆ ಹೆಚ್ಚಾಗುತ್ತದೆ ಎಂಬ ನಿಟ್ಟಿನಲ್ಲಿ ಕಂಡ ಕಂಡಲ್ಲಿ ಉಗುಳುವುದಕ್ಕೆ ನಿಷೇಧ ಹೇರಲಾಗಿತ್ತು. ಆದರೆ ತಂಬಾಕು ಸೇರಿದಂತೆ ಇದರ ಉತ್ಪನ್ನಗಳನ್ನು ಸೇವಿಸುವುದು ಹಾಗೂ ಉಗುಳುವುದಕ್ಕೂ ನಿಷೇಧ ಹೇರಲಾಗುತ್ತಿದೆ.

ಕೇಂದ್ರ ಸರ್ಕಾರ ಈ ಬಗ್ಗೆ ಆಯಾಯ ರಾಜ್ಯಗಳಿಗೆ ಪತ್ರದ ಮುಖೇನ ಸೂಚನೆ ನೀಡಿತ್ತು. ಅದರಂತೆ ನಮ್ಮ ರಾಜ್ಯದಲ್ಲಿಯೂ ತಂಬಾಕು ಸೇವನೆ ಹಾಗು ಉಗುಳುವುದನ್ನು ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಜೊತೆಗೆ ಈ ಆದೇಶ ಉಲ್ಲಂಘನೆ ಮಾಡಿದರೆ ಐಪಿಸಿ ಸೆಕ್ಷನ್ 188, 268, 269, 279ಅಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...