ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ಕೊರೊನಾ ಪಾಸಿಟಿವ್ ಬಂದಿದ್ದು ಯಡಿಯೂರಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪ ಈಗ ತಮ್ಮ ಆರೋಗ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ.
ವಿಡಿಯೋ ಸಂದೇಶ ರವಾನೆ ಮಾಡಿರುವ ಯಡಿಯೂರಪ್ಪ, ನಿನ್ನೆ ರಾತ್ರಿ 8.30ಕ್ಕೆ ಕೊರೊನಾ ಇರುವುದು ದೃಢಪಟ್ಟಿದೆ. ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದಾರೆ. ಯಾವುದೇ ರೀತಿಯ ಆರೋಗ್ಯ ಸಮಸ್ಯೆಯಿಲ್ಲ. ವೈದ್ಯರು ಗುಣಮುಖರಾಗುವ ಭರವಸೆ ನೀಡಿದ್ದಾರೆ. ಆಸ್ಪತ್ರೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದೇನೆಂದು ಯಡಿಯೂರಪ್ಪ ಹೇಳಿದ್ದಾರೆ.
ಅಧಿಕಾರಿಗಳ ಜೊತೆ ನೇರ ಸಂಪರ್ಕದಲ್ಲಿದ್ದು, ಆತಂಕಪಡುವ ಅಗತ್ಯವಿಲ್ಲವೆಂದು ಯಡಿಯೂರಪ್ಪ ಹೇಳಿದ್ದಾರೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ಎಲ್ಲರಿಗೂ ಚಿಕಿತ್ಸೆ ಮುಂದುವರೆದಿದೆ.