
ತುಂಗಾ ಮೇಲ್ದಂಡೆ ಯೋಜನೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಕರ್ನಾಟಕ ನೀರಾವರಿ ನಿಗಮ ಮಹತ್ವದ ಮಾಹಿತಿ ನೀಡಿದೆ.
ಮುಂಗಾರು ಬೆಳೆಗಾಗಿ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ ಜುಲೈ 6 ರಿಂದ ನೀರು ಹರಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಹೀಗಾಗಿ ಅಚ್ಚುಕಟ್ಟು ಪ್ರದೇಶದ ಸಾರ್ವಜನಿಕರು ನದಿಯ ಮುಖ್ಯ ನಾಲೆ ಹಾಗೂ ಉಪ ನಾಲೆಗಳಲ್ಲಿ ಯಾವುದೇ ರೀತಿಯ ಚಟುವಟಿಕೆ ಕೈಗೊಳ್ಳದಂತೆ ಸೂಚಿಸಲಾಗಿದೆ.