ತೃತೀಯ ಲಿಂಗಿಗಳು ಸರ್ಕಾರಗಳಿಂದ ನಿರ್ಲಕ್ಷಕ್ಕೆ ಒಳಗಾಗುತ್ತಲೇ ಬಂದಿದ್ದಾರೆ. ಇದೀಗ ರಾಜ್ಯ ಸರ್ಕಾರ ಅವರಿಗೆ ಸಿಹಿ ಸುದ್ದಿಯೊಂದನ್ನು ನೀಡಲು ಮುಂದಾಗಿದೆ.
ಸರ್ಕಾರಿ ನೇಮಕಾತಿಗಳಲ್ಲಿ ತೃತೀಯಲಿಂಗಿಗಳನ್ನು ಇತರೆ ಹಿಂದುಳಿದ ವರ್ಗಗಳು (ಓಬಿಸಿ) ಕೆಟಗರಿ ಅಡಿಯಲ್ಲಿ ಪರಿಗಣಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.
ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸದಿರುವುದನ್ನು ಪ್ರಶ್ನಿಸಿ ಸ್ವಯಂ ಸೇವಾ ಸಂಸ್ಥೆಯೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.