ಮಂಗಳೂರು: ಎರಡು ಕೆಜಿ ಚಿನ್ನವನ್ನು ಒಳ ಉಡುಪಿನಲ್ಲಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರನ್ನು ಕಾಸರಗೋಡಿನ ಫೈಜಲ್ ಹಾಗೂ ಮೊಹಮ್ಮದ್ ಹುಸೇನ್ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಚಿನ್ನವನ್ನು ಒಳ ಚಡ್ಡಿಯ ಜೇಬಿನಲ್ಲಿ ಪೇಸ್ಟ್ ರೂಪದಲ್ಲಿ ಇರಿಸಿಕೊಂಡು ಶಾರ್ಜಾದಿಂದ ಮಂಗಳೂರು ಏರ್ ಪೋರ್ಟ್ ಗೆ ಬಂದಿದ್ದಾರೆ.
ತಪಾಸಣೆ ವೇಳೆ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, 1.9 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಚಿನ್ನವನ್ನು ಬಂಧಿತರಿಂದ ವಶಕ್ಕೆ ಪಡೆಯಲಾಗಿದೆ.