ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ಕೊರೊನಾ ದಾಳಿಗೆ ತತ್ತರಿಸಿ ಹೋಗಿದ್ದು, ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಒಂದು ವಾರ ಕಾಲ ಲಾಕ್ ಡೌನ್ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರದ ಶೇಕಡಾ 50ಕ್ಕಿಂತ ಅಧಿಕ ಆದಾಯ ಕೇವಲ ಬೆಂಗಳೂರು ಒಂದರಿಂದಲೇ ಬರುವುದರಿಂದ ಈಗ ಲಾಕ್ ಡೌನ್ ಹಿಂಪಡೆಯಲಾಗಿದೆ.
ಆದರೆ ಒಂದು ವಾರದ ಬೆಂಗಳೂರು ಲಾಕ್ ಡೌನ್ ನಿಂದಾಗಿ ಕೈಗಾರಿಕೆಗಳು ಮತ್ತು ಉದ್ಯಮಗಳಿಗೆ ಸುಮಾರು 20 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ರಾಜ್ಯ ಸರ್ಕಾರಕ್ಕೆ 2 ಸಾವಿರ ಕೋಟಿ ರೂಪಾಯಿ ತೆರಿಗೆ ತಪ್ಪಿದೆ ಎಂದು ಅಂದಾಜಿಸಲಾಗಿದೆ.