alex Certify ದೈನಂದಿನ ಜೀವನದಲ್ಲಿ ಹೆಚ್ಚು ಕನ್ನಡ ಬಳಸಿ; ಮಕ್ಕಳ ಜೊತೆಯೂ ಕನ್ನಡದಲ್ಲೇ ಮಾತನಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೈನಂದಿನ ಜೀವನದಲ್ಲಿ ಹೆಚ್ಚು ಕನ್ನಡ ಬಳಸಿ; ಮಕ್ಕಳ ಜೊತೆಯೂ ಕನ್ನಡದಲ್ಲೇ ಮಾತನಾಡಿ

ಬೆಂಗಳೂರು: 65ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕನ್ನಡ ಭಾಷೆ ಉಳಿವಿಗಾಗಿ ಹೆಚು ಹೆಚ್ಚು ಕನ್ನಡದಲ್ಲಿಯೇ ಮಾತನಾಡಬೇಕು ಎಂದು ಕರೆ ನೀಡಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ರಾಜ್ಯೋತ್ಸವ ಆಚರಿಸಲಾಗುತ್ತಿದೆ ಎಂದರು. ದೈನಂದಿನ ಜೀವನದಲ್ಲಿ, ವ್ಯವಹಾರಗಳಲ್ಲಿ ಹೆಚ್ಚು ಕನ್ನಡ ಬಳಸಿ, ಮಕ್ಕಳ ಜೊತೆಯೂ ಕನ್ನಡದಲ್ಲಿಯೇ ಮಾತನಾಡಿ. ಮಕ್ಕಳು ಕನ್ನಡ ಭಾಷೆ ಮಾತನಾಡುವುದರಿಂದ ನಮ್ಮ ಭಾಷೆ ಉಳಿವಿಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಮುಂದಿನ ವರ್ಷ ಕನ್ನಡ ಕಾಯಕ ವರ್ಷ ಕಾರ್ಯಕ್ರಮ ಜಾರಿಗೊಳಿಸಲಾಗುವುದು. ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮಕ್ಕೆ ರೂಪುರೇಷೆ ಸಿದ್ಧಪಡಿಸಲಾಗಿದೆ. ಕರ್ನಾಟಕ ಏಕಿಕರಣಕ್ಕಾಗಿ ಹಲವರು ಹೋರಾಡಿದ್ದಾರೆ. ಅಖಂಡ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...