ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಿನ್ನೆ ಸಿಬಿಐ ದಾಳಿ ನಡೆದ ಬೆನ್ನಲ್ಲೇ ಇಂದು ಸ್ಪಟಿಕ ಮಠದ ನಂಜಾವದೂತ ಸ್ವಾಮಿಜಿ ಡಿಕೆಶಿ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಆಗಮಿಸಿರುವ ನಂಜಾವದೂತ ಸ್ವಾಮೀಜಿ ಬಳಿ ಡಿಕೆಶಿ ತಮ್ಮ ಮನದ ನೋವು ಹೇಳಿಕೊಂಡಿದ್ದಾರೆ. ಅಲ್ಲದೇ ನಿನ್ನೆ ನಡೆದ ಸಿಬಿಐ ದಾಳಿ ಕುರಿತು ವಿವರಿಸಿದ್ದಾರೆ.
ಸಿಬಿಐ ದಾಳಿ ನಡೆದದ್ದಕ್ಕೆ ನನಗೆ ಬೇಸರವಿಲ್ಲ. ಇದೆಲ್ಲವೂ ರಾಜಕೀಯ ಷಡ್ಯಂತ್ರ. ನಾನು ಕೆಪಿಸಿಸಿ ಅಧ್ಯಕ್ಷನಾದ ಬಳಿಕ ತುಂಬಾ ಆಕ್ಟೀವ್ ಆಗಿ ಪಕ್ಷ ಸಂಘಟನೆಗೆ ಓಡಾಡತೊಡಗಿದ್ದು ಬಿಜೆಪಿ ನಾಯಕರ ಕಣ್ಣು ಕುಕ್ಕಿದಂತಾಗಿದೆ. ಇದೀಗ ಉಪಚುನಾವಣೆ ಘೋಷಣೆಯಾಗಿರುವುದರಿಂದ ಸಿಬಿಐ ದಾಳಿ ನಡೆಯುವಂತೆ ಮಾಡಿದ್ದಾರೆ. ಸಿಬಿಐ ಅಧಿಕಾರಿಗಳು ದಾಳಿ ವೇಳೆ ನನ್ನ ಸ್ಟಾಫ್ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಪಿಎ ಮೇಲೆ ಕೈ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲದೇ ನನ್ನ ಮಗಳ ಮದುವೆಗಾಗಿ ಖರೀದಿಸಿಟ್ಟಿದ್ದ ಚಿನ್ನಾಭರಣಗಳನ್ನೂ ಸೀಜ್ ಮಾಡಿ ತೆಗೆದುಕೊಂಡು ಹೋಗಿರುವುದು ನನ್ನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಎಂದು ಸ್ವಾಮೀಜಿ ಬಳಿ ದುಃಖ ತೋಡಿಕೊಂಡಿದ್ದಾರೆ ಎನ್ನಲಾಗಿದೆ.