ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸ್ ವಶದಲ್ಲಿರುವ ನಟಿ ರಾಗಿಣಿ ಆರೋಗ್ಯದಲ್ಲಿ ಏರುಪೇರಾಗಿದೆ. ರಾಗಿಣಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿದೆ. ಈ ಕಾರಣಕ್ಕೆ ರಾಗಿಣಿ ವಿಚಾರಣೆ ವಿಳಂಬವಾಗಿದೆ.
ರಾಗಿಣಿ ಅನಾರೋಗ್ಯ ಹಿನ್ನಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ. ರಾಗಿಣಿ ವಿಚಾರಣೆ ಸೋಮವಾರ ನಡೆಯಲಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ರಾಗಿಣಿ ವಿಚಾರಣೆ ನಡೆದಿತ್ತು. ಆದ್ರೆ ಇಂದು ಯಾವುದೇ ವಿಚಾರಣೆ ನಡೆದಿಲ್ಲ ಎನ್ನಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ರಾಗಿಣಿ ಎರಡನೇ ಆರೋಪಿಯಾಗಿದ್ದಾರೆ.
ರಾಗಿಣಿ ಮನೆ ಮೇಲೆ ನಿನ್ನೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ನಂತ್ರ ರಾಗಿಣಿಯನ್ನು ವಶಕ್ಕೆ ಪಡೆದಿದ್ದರು. ರಾತ್ರಿಯವರೆಗೆ ವಿಚಾರಣೆ ನಡೆಸಿ ರಾಗಿಣಿ ಅರೆಸ್ಟ್ ಮಾಡಿದ್ದರು. ನಿನ್ನೆಯ ವಿಚಾರಣೆ ವೇಳೆ ರಾಗಿಣಿ ತಪ್ಪೊಪ್ಪಿಕೊಂಡಿದ್ದರು. ಎರಡು ಬಾರಿ ಡ್ರಗ್ಸ್ ತೆಗೆದುಕೊಂಡಿದ್ದೇನೆ. ಫ್ಲಾಟ್ ನಲ್ಲಿ ಡ್ರಗ್ಸ್ ತೆಗೆದುಕೊಂಡಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ರಾಗಿಣಿ ಜಾಮೀನು ಕೋರಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ರಾಗಿಣಿ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.