ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ಈಗ ಪರಪ್ಪನ ಅಗ್ರಹಾರ ಪಾಲಾಗಿದ್ದಾರೆ. 14 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದ್ದು, ರಾಗಿಣಿ ವಿರುದ್ಧ ಗಂಭೀರ ಪ್ರಕರಣಗಳು ದಾಖಲಾಗಿರುವುದರಿಂದ ಜಾಮೀನು ಸಿಗುವುದು ಅಷ್ಟು ಸುಲಭವಿಲ್ಲವೆಂದು ಹೇಳಲಾಗುತ್ತಿದೆ.
ರಾಜಕೀಯ ಪ್ರವೇಶಿಸಿ ಉನ್ನತ ಸ್ಥಾನಕ್ಕೇರಬೇಕೆಂಬ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ರಾಗಿಣಿಯವರಿಗೆ ಡ್ರಗ್ಸ್ ಪ್ರಕರಣದಿಂದ ಭಾರೀ ಹಿನ್ನಡೆಯಾಗಿದೆ. ಬಿಜೆಪಿ ಸೇರ್ಪಡೆಗೊಳ್ಳಲು ಬಯಸಿದ್ದ ರಾಗಿಣಿ ಕಳೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದ್ದರು.
ಅಷ್ಟೇ ಅಲ್ಲದೆ ಲಾಕ್ ಡೌನ್ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿದ್ದ ರಾಗಿಣಿಗೆ ಈಗ ಬಹಿರಂಗವಾಗಿರುವ ಡ್ರಗ್ಸ್ ಪ್ರಕರಣ ಕಂಟಕವಾಗಿ ಪರಿಣಮಿಸಿದೆ. ರಾಗಿಣಿ ಚಿತ್ರರಂಗದ ಬದುಕಿನ ಜೊತೆಗೆ ರಾಜಕೀಯ ಮಹತ್ವಾಕಾಂಕ್ಷೆಯೂ ಹಳ್ಳ ಹಿಡಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.