
ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟಿ ರಾಗಿಣಿ ದ್ವಿವೇದಿ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಸಿಸಿಬಿ ವಶದಲ್ಲಿರುವ ಪ್ರಕರಣದ ಆರೋಪಿಗಳಾದ ನಟಿ ರಾಗಿಣಿ ದ್ವಿವೇದಿ, ವಿರೇನ್ ಖನ್ನಾ, ರವಿಶಂಕರ್ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ.
ಈ ವೇಳೆ ಸಿಸಿಬಿ ಅಧಿಕಾರಿಗಳು ಆರೋಪಿ ರವಿಶಂಕರ್ ಹೊರತುಪಡಿಸಿ ನಟಿ ರಾಗಿಣಿ ಹಾಗೂ ವಿರೇನ್ ಖನ್ನಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ.