alex Certify ನಟಿ ಸಂಜನಾ ಮತ್ತೆ ಸಿಸಿಬಿ ಕಸ್ಟಡಿಗೆ…? ತೀರ್ಪು ಕಾಯ್ದಿರಿಸಿದ ನ್ಯಾಯಾಲಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ಸಂಜನಾ ಮತ್ತೆ ಸಿಸಿಬಿ ಕಸ್ಟಡಿಗೆ…? ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಸೇರಿ 5 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಆದರೆ ನಟಿ ಸಂಜನಾ ಅವರನ್ನು ಮತ್ತೆ ಕಸ್ಟಡಿಗೆ ವಹಿಸುವಂತೆ ಸಿಸಿಬಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಪ್ರಕರಣದ ಆರೋಪಿಗಳಾದ ನಟಿ ರಾಗಿಣಿ, ಸಂಜನಾ, ರಾಹುಲ್, ಪ್ರಶಾಂತ್ ರಾಂಕ, ಲೂಮ್ ಪೆಪ್ಪರ್, ವಿರೇನ್ ಖನ್ನಾ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾದ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳು ಎಲ್ಲಾ 6 ಆರೋಪಿಗಳನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದ್ದರು.

ಈ ವೇಳೆ ನಟಿ ಸಂಜನಾರನ್ನು ಹೊರತುಪಡಿಸಿ ಉಳಿದೆಲ್ಲ ಆರೋಪಿಗಳ ವಿಚಾರಣೆ ಅಂತ್ಯಗೊಂಡಿದ್ದು ಸಂಜನಾ ಅವರನ್ನು ಇನ್ನಷ್ಟು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸುವಂತೆ ಅಧಿಕಾರಿಗಳು ಕೋರ್ಟ್ ಗೆ ಮನವಿ ಮಾಡಿದ್ದಾರೆ.

ಈ ಹಿನ್ನಲೆಯಲ್ಲಿ ನಟಿ ಸಂಜನಾ ಕುರಿತ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದ್ದು, ಅವರನ್ನು ಇನ್ನೂ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸುವ ಸಾಧ್ಯತೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...