![](https://kannadadunia.com/wp-content/uploads/2021/01/chetanmarriage.jpg)
ವಿರಾಟ್ ಚಕ್ರವರ್ತಿ ನಿರ್ದೇಶನದ ‘ಆ ದಿನಗಳು’ ಸಿನಿಮಾ ಖ್ಯಾತಿಯ ಚೇತನ್ ನಟನೆಯ ಹೊಸ ಚಿತ್ರಕ್ಕೆ ‘100 ಕ್ರೋರ್ಸ್’ ಎಂಬ ಹೆಸರಿಟ್ಟಿದ್ದು, ಟೈಟಲ್ ಪೋಸ್ಟರ್ ಅನ್ನು ಈಗಾಗಲೇ ರಿಲೀಸ್ ಮಾಡಿದ್ದಾರೆ. ಈ ಸಿನಿಮಾವನ್ನು ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ರಿಲೀಸ್ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ಇದೊಂದು ಕ್ರೈಮ್, ಥ್ರಿಲ್ಲರ್ ಕಥೆ ಹೊಂದಿರುವ ಸಿನಿಮಾವಾಗಿದ್ದು, ಈ ಚಿತ್ರದ ಟೈಟಲ್ ಪೋಸ್ಟರ್ ಅನ್ನು ನಟ ಚೇತನ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ನನ್ನ ತೆಲುಗು, ಕನ್ನಡ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿದೆ..! 100 crores ಕ್ರೈಮ್ ಥ್ರಿಲ್ಲರ್ ಚಿತ್ರ ಪ್ರಸ್ತುತ ಹೈದರಾಬಾದ್ ನಲ್ಲಿ ಚಿತ್ರೀಕರಣದಲ್ಲಿದೆ ಎಂದು ಬರೆದುಕೊಂಡಿದ್ದಾರೆ.