ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರಿಗೆ ಮತ್ತೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ. ಇಬ್ಬರು ನಟಿ ಮಣಿಯರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾ ಅವರ ನ್ಯಾಯಾಂಗ ಬಂಧನ ಅವಧಿ ಈಗಾಗಲೇ ಮುಗಿದಿದ್ದ ಹಿನ್ನೆಲೆಯಲ್ಲಿ ಎನ್ ಡಿ ಪಿ ಎಸ್ ವಿಶೇಷ ನ್ಯಾಯಾಲಯದಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಜಿ.ಎಂ. ಶೀನಪ್ಪ ನಟಿಯರಿಗೆ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟಿಯರಿಗೆ ಮತ್ತೆ ಜೈಲೂಟವೇ ಫಿಕ್ಸ್ ಆಗಿದೆ. ಆದರೆ ಇಬ್ಬರೂ ಜಾಮೀನುಗಾಗಿ ಹೈಕೊರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.