alex Certify ನಶೆ ರಾಣಿಯರಿಗೆ ಇಡಿ ಅಧಿಕಾರಿಗಳಿಂದ ಜೈಲಿನಲ್ಲಿಯೇ ಡ್ರಿಲ್; ರಾಗಿಣಿ, ಸಂಜನಾ ವಿಚಾರಣೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಶೆ ರಾಣಿಯರಿಗೆ ಇಡಿ ಅಧಿಕಾರಿಗಳಿಂದ ಜೈಲಿನಲ್ಲಿಯೇ ಡ್ರಿಲ್; ರಾಗಿಣಿ, ಸಂಜನಾ ವಿಚಾರಣೆ ಆರಂಭ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿಯವರಿಗೆ ಇಡಿ (ಜಾರಿ ನಿರ್ದೇಶನಾಲಯ) ಸಂಕಷ್ಟ ಶುರುವಾಗಿದೆ. ನಟಿಯರಿಬ್ಬರನ್ನು ಇಡಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ರಾಗಿಣಿ ದ್ವಿವೇದಿ ಹಾಗೂ ಸಂಜನಾ ವಿರುದ್ಧ ಡ್ರಗ್ಸ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಟಿಯರಿಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ ನಟಿಯರನ್ನು ವಿಚಾರಣೆಗೆ ಒಳಪಡಿಸಿದೆ.

ಈಗಾಗಲೇ ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿ ರಾಗಿಣಿ ಹಾಗೂ ಸಂಜನಾ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅಕ್ರಮ ಹಣ ವರ್ಗಾವಣೆ ಕುರಿತು ಸಂಗ್ರಹಿಸಿರುವ ದಾಖಲೆಗಳನ್ನು ಹಿಡಿದು ಬಂದಿರುವ ಇಡಿ ಅಧಿಕಾರಿಗಳು ಜೈಲಿನಲ್ಲಿಯೇ ನಟಿಯರಿಬ್ಬರನ್ನು ವಿಚಾರಣೆ ನಡೆಸಿದ್ದಾರೆ.

ಇನ್ನು ಇಂದಿನಿಂದ 5 ದಿನಗಳ ಕಾಲ ನಟಿಯರಿಬ್ಬರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಇದೇ ವೇಳೆ ವಿರೇನ್ ಖನ್ನಾ, ರವಿಶಂಕರ್ ಹಾಗೂ ರಾಹುಲ್ ವಿರುದ್ಧವೂ ಇಡಿ ವಿಚಾರಣೆ ನಡೆಸಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...