alex Certify ನಾನು ಅದರ ಅಪ್ಪನಂಥಾ ಸಿನಿಮಾ ಮಾಡಿದ್ದೇನೆಂದ ಮಾಜಿ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾನು ಅದರ ಅಪ್ಪನಂಥಾ ಸಿನಿಮಾ ಮಾಡಿದ್ದೇನೆಂದ ಮಾಜಿ ಸಿಎಂ

ಬೆಂಗಳೂರು: ಉಪ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ವಾಕ್ಸಮರಕ್ಕೆ ಕಾರಣವಾಗುತ್ತಿದ್ದು, ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಟಾಂಗ್ ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಾನು ’ಕುರುಕ್ಷೇತ್ರ’ದ ಅಪ್ಪನಂಥಾ ಸಿನಿಮಾ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಉಪ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಕುಟುಂಬಕ್ಕೆ ಯಾವುದೇ ಗಾಡ್ ಫಾದರ್ ಇಲ್ಲ. ನಮಗೆ ರಾಜ್ಯದ ಆರೂವರೆ ಕೋಟಿ ಜನರೇ ಗಾಡ್ ಫಾದರ್. ಅಧಿಕಾರಕ್ಕಾಗಿ ನಾನು ಯಾರ ಮನೆ ಬಾಗಿಲಿಗೂ ಹೋಗಿ ನಿಂತಿಲ್ಲ. ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಬೇಡಿ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಮುನಿರತ್ನ ಅವರಿಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಅದೇನೋ ಸಿನಿಮಾ ವಿಚಾರ ಮಾತನಾಡುತ್ತಾರೆ. ನಾನು ಅದರಪ್ಪನಂಥಾ ಸಿನಿಮಾ ಮಾಡಿದ್ದೇನೆ. ಜಾಗ್ವಾರ್ ಸಿನಿಮಾಗಾಗಿ ನಾನು, ಅವರು ಕುರುಕ್ಷೇತ್ರ ಸಿನಿಮಾಗೆ ಖರ್ಚು ಮಾಡಿದ್ದಕ್ಕಿಂತಲೂ ಹೆಚ್ಚು ಖರ್ಚು ಮಾಡಿದ್ದೇನೆ. ಬ್ಯಾಂಕ್ ನಿಂದ ಸಾಲ ಪಡೆದು ಸಿನಿಮಾ ಮಾಡಿದ್ದೇನೆ. ಚಿತ್ರರಂಗದ ಬಗ್ಗೆಯಾಗಲಿ, ರಾಜಕೀಯದ ಬಗ್ಗೆಯಾಗಲಿ ನಾವು ಇವರಿಂದ ಕಲಿಯಬೇಕಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...