ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಾಳೆ ಯಿಂದ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯಲ್ಲಿ ಕಠಿಣ ನಿಯಮ ಜಾರಿ ಮಾಡಿದ್ದು, ಸಾರಿಗೆ ಸಂಚಾರ ಕೂಡ ಸಂಪೂರ್ಣ ಬಂದ್ ಮಾಡಲಾಗುತ್ತಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಈ ಕುರಿತು ಮಾಹಿತಿ ನೀಡಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಮುಂದಿನ 2 ವಾರ ಅಂದರೆ 14 ದಿನಗಳ ಕಾಲ ಬಿಗಿ ಕ್ರಮ ಜಾರಿಗೆ ಬರುತ್ತಿದೆ ಎಂದರು.
ರಾಜ್ಯಾದ್ಯಂತ ಸಾರಿಗೆ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಸೇರಿದಂತೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ. ಅಷ್ಟೇ ಅಲ್ಲ ಬೆಂಗಳೂರಿನಲ್ಲಿ ಬಿಎಂಟಿಸಿ, ಮೆಟ್ರೋ ಸಂಚಾರ ಕೂಡ ಬಂದ್ ಆಗಲಿದೆ ಎಂದರು ಹೇಳಿದರು.
ಬಸ್, ಕ್ಯಾಬ್, ಆಟೋ, ಖಾಸಗಿ ವಾಹನಗಳ ಸಂಚಾರಕ್ಕೂ ನಿಷೇಧ ಹೇರಲಾಗಿದೆ ನಾಳೆ ರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದರು.
ಲಾಕ್ʼ ನಡುವೆಯೂ ಮದ್ಯ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್
* ನಾಳೆ ರಾತ್ರಿಯಿಂದ 14 ದಿನಗಳ ಕಾಲ ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ
* ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಸೇರಿದಂತೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತ
* ಕ್ಯಾಬ್, ಆಟೋ, ಖಾಸಗಿ ವಾಹನಗಳ ಸಂಚಾರಕ್ಕೂ ನಿಷೇಧ
* ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಸಂಪೂರ್ಣ ಸ್ಥಗಿತ
* ಖಾಸಗಿ ವಾಹನ ಸಂಚಾರಕ್ಕೆ ನಿಷೇಧ
* ಗಾರ್ಮೆಂಟ್ಸ್ ಹೊರತುಪಡಿಸಿ ಉಳಿದೆಲ್ಲ ಕಾರ್ಖಾನೆಗಳಿಗೆ ಅನುಮತಿ
* ಗೂಡ್ಸ್ ವಾಹನಗಳ ಸರಕು ಸಾಗಾಟಕ್ಕೆ ಮಾತ್ರ ಅವಕಾಶ
* ಹೋಟೆಲ್, ಬಾರ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ
* ಮೆಟ್ರೋ ಸೇವೆ ಸ್ಥಗಿತ
* ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವಕಾಶ
* ಕೃಷಿ ಚಟುವಟಿಕೆ, ಕಟ್ಟಡ ನಿರ್ಮಾಣಕ್ಕೆ ಅವಕಾಶ