ಕೊರೊನಾದಿಂದಾಗಿ ಎಷ್ಟೋ ಜನ ಕೆಲಸವನ್ನು ಕಳೆದುಕೊಂಡು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಇದರಲ್ಲಿ ಮಹಿಳೆಯರು ಹೊರತಾಗಿಲ್ಲ. ಇಂತಹ ನಿರುದ್ಯೋಗಿ ಮಹಿಳೆಯರಿಗಾಗಿ ಸ್ವಯಂ ಉದ್ಯೋಗ ಹೊಂದಲು ಸರ್ಕಾರ ಮುಂದಾಗಿದ್ದು, ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯ ನೀಡುತ್ತಿದೆ.
ಹೌದು, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ. ತುಮಕೂರು ಜಿಲ್ಲೆಯ ನಿರುದ್ಯೋಗಿ ಅರ್ಹ ಮಹಿಳೆಯರು ಈ ಯೋಜನೆಯಡಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದು. ಇದಕ್ಕಾಗಿ ಅರ್ಜಿ ಆಹ್ವಾನ ಮಾಡಲಾಗಿದೆ.
ಅರ್ಹ ಮಹಿಳೆಯರಿಗಾಗಿ ನಿಂದ ಗರಿಷ್ಠ 3 ಲಕ್ಷ ರೂ.ಗಳವರೆಗೆ ಸಾಲ ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು 18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಹರಾಗಿರುತ್ತಾರೆ. ಹಾಗೆಯೇ ಪರಿಶಿಷ್ಟ ಜಾತಿ ಹಾಗೂ ಪ.ಪಂಗಡದ ಮಹಿಳೆಯರಾಗಿದ್ದಲ್ಲಿ ಅವರಿಗೆ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ಒಳಗಿರಬೇಕು. ಹಾಗೂ ಸಾಮಾನ್ಯ ವರ್ಗದ ಮಹಿಳೆಯರ ವಾರ್ಷಿಕ ಆದಾಯ 1.5 ಲಕ್ಷ ರೂಪಾಯಿ ಒಳಗಿರಬೇಕು.
ಇನ್ನು ನವೆಂಬರ್ 30 ರೊಳಗಾಗಿ ಅರ್ಜಿಯನ್ನು ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ 7619180160/9538580624 ಈ ನಂಬರ್‌ಗೆ ಅಥವಾ ಆಯಾಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಂಪರ್ಕಿಸಬಹುದು.