ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಗುರುವಾರ ಒಂದೇ ದಿನ ಎರಡು ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಕರ್ನಾಟಕದಲ್ಲೂ ಸಹ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈವರೆಗೆ ದಿವ್ಯ ನಿರ್ಲಕ್ಷ ತೋರಿಸುತ್ತಿದ್ದ ಸಾರ್ವಜನಿಕರು ಈಗ ಎಚ್ಚೆತ್ತುಕೊಳ್ಳುತ್ತಿದ್ದಾರೆ.
ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದ ಸಾರ್ವಜನಿಕರು ಕೊರೊನಾ ಕಡಿಮೆಯಾಗುತ್ತಿದ್ದಂತೆ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ಮರೆತೇ ಬಿಟ್ಟಿದ್ದರು. ಅಲ್ಲದೆ ಕೆಲವರಂತೂ ಕೊರೊನಾ ಇಲ್ಲವೇ ಇಲ್ಲ ಎಂದು ವಾದಿಸುತ್ತಿದ್ದರು.
ಹೆಚ್ಚುತ್ತಿರುವ ʼಕೊರೊನಾʼ ಸಾವಿನ ಸಂಖ್ಯೆ ಬಗ್ಗೆ ಮಧ್ಯಪ್ರದೇಶ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ
ಯಾವಾಗ ಕೊರೊನಾ ಎರಡನೇ ಅಲೆ ಜೀವಗಳನ್ನು ಬಲಿ ಪಡೆಯಲಾರಂಭಿಸಿತೋ ಆಗ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಈಗ ಮಾಸ್ಕ್ ಧರಿಸುವುದು, ಹೊರಗಡೆ ಹೋಗಿ ಬಂದ ಸಂದರ್ಭದಲ್ಲಿ ಸ್ಯಾನಿಟೈಸ್ ಮಾಡಿಕೊಳ್ಳುವುದು, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮೊರೆ ಹೋಗುತ್ತಿದ್ದಾರೆ.
ಅಲ್ಲದೆ ಈ ಮೊದಲಿನಂತೆ ಕಷಾಯ ಕುಡಿಯಲು ಆರಂಭಿಸಿದ್ದಾರೆ. ಇದರ ಜೊತೆಗೆ ಸ್ಟೀಮ್ ತೆಗೆದುಕೊಳ್ಳುವುದು, ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಸಲುವಾಗಿ ಆಯುರ್ವೇದ ವಿಧಾನಗಳನ್ನು ಅನುಸರಿಸುವುದರೊಂದಿಗೆ ಯೋಗ ಮಾಡಲು ಆರಂಭಿಸಿದ್ದಾರೆ.