alex Certify ನಿವೃತ್ತ ಪೊಲೀಸ್‌ ಅಧಿಕಾರಿ ಕೊರೊನಾಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೃತ್ತ ಪೊಲೀಸ್‌ ಅಧಿಕಾರಿ ಕೊರೊನಾಗೆ ಬಲಿ

ನಿವೃತ್ತ ಪೊಲೀಸ್ ಅಧಿಕಾರಿ ನೂರುಲ್ಲಾ ಷರೀಫ್ ನಿಧನರಾಗಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ, ಶಿಕಾರಿಪುರದಲ್ಲಿ ಅವರು ಕಾರ್ಯನಿರ್ವಹಿಸಿದ್ದರು. ಸಿಓಡಿ, ಡಿವೈಎಸ್ಪಿ ಆಗಿ ಕೆಲಸ ಮಾಡಿದ್ದ ಅವರು 2 ವರ್ಷಗಳ ಹಿಂದೆ ನಿವೃತ್ತರಾಗಿದ್ದರು.

ಚನ್ನಗಿರಿ ತಾಲ್ಲೂಕಿನವರಾಗಿದ್ದ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದು, ಜನಾನುರಾಗಿ ಅಧಿಕಾರಿಯಾಗಿದ್ದರು. ಬಡ್ತಿ ಹೊಂದಿದ್ದ ಅವರು ಕರ್ತವ್ಯಕ್ಕಾಗಿ ಬೆಂಗಳೂರಿಗೆ ತೆರಳಿ ನಿವೃತ್ತಿ ನಂತರವೂ ಅಲ್ಲೇ ನೆಲೆಸಿದ್ದರು.

ಜನಸಾಮಾನ್ಯರ ಸಂಕಷ್ಟಕ್ಕೆ ಸದಾ ಸ್ಪಂದಿಸುತ್ತಿದ್ದ ನೂರುಲ್ಲಾ ಷರೀಫ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...