ಶಿವಮೊಗ್ಗ: ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ
ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಅವರು ಮಂಗಳವಾರ ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಹಕ್ಕುಪತ್ರ ತಲುಪಿಸಲಾಗುತ್ತಿದ್ದು, ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು ಎಂದು ತಿಳಿಸಿದರು.
ಶಿಕಾರಿಪುರ ತಾಲೂಕಿನಲ್ಲಿ ಮೆಕ್ಕೆ ಜೋಳ ಉತ್ತಮವಾಗಿ ಬಂದಿದ್ದು, ಕಾಳು ಬಿಡಿಸುವ ಯಂತ್ರವನ್ನು ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸಲಾಗುತ್ತಿದೆ. ಇದಕ್ಕಾಗಿ ಶಿಕಾರಿಪುರ ತಾಲೂಕಿಗೆ 1.40ಕೋಟಿ ರೂ. ನಿಗದಿಪಡಿಸಲಾಗಿಗೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.