ಕರಾವಳಿ ಜಿಲ್ಲೆಗಳಲ್ಲಿ ಈ ಹಿಂದೆ ನಿಗೂಢ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಬಳಕೆ ಮಾಡುತ್ತಿರುವ ಪ್ರಕರಣ ವರದಿಯಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ಆಂತರಿಕ ಭದ್ರತಾ ಪಡೆ ಅಧಿಕಾರಿಗಳು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರಾದರೂ ಆರೋಪಿಗಳ ಪತ್ತೆಯಾಗಿರಲಿಲ್ಲ.
ಇದೀಗ ಮತ್ತೆ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಗುಪ್ತಚರ ತನಿಖಾ ತಂಡ ‘ರಾ’ ತನಿಖೆಯನ್ನು ಚುರುಕುಗೊಳಿಸಿದ್ದು, ರಾಜ್ಯ ಗುಪ್ತಚರ ಇಲಾಖೆಗೂ ಈ ಕುರಿತು ಮಾಹಿತಿ ನೀಡಿದೆ ಎಂದು ಹೇಳಲಾಗಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿ ಮೂರು ಬಾರಿ ಸ್ಯಾಟಲೈಟ್ ಫೋನ್ ಬಳಕೆಯಾಗಿದೆ ಎಂದು ತಿಳಿದುಬಂದಿದೆ.
ಭಾರತದಲ್ಲಿ ಸ್ಯಾಟಲೈಟ್ ಫೋನ್ ಬಳಕೆಗೆ ನಿಷೇಧವಿದ್ದು, ಇದರ ನಡುವೆಯೂ ಇದನ್ನು ಬಳಕೆ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಭಯೋತ್ಪಾದಕ ಸಂಘಟನೆಗಳು ಸ್ಯಾಟಲೈಟ್ ಫೋನ್ ಗಳನ್ನು ಬಳಕೆ ಮಾಡುತ್ತಿದ್ದು, ಇದೀಗ ಇದು ಕರ್ನಾಟಕದಲ್ಲೂ ಬಳಕೆಯಾಗಿರುವುದರಿಂದ ಗುಪ್ತಚರ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರಿಸಿದೆ.