
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಮಂಗಳೂರಿನ ಶೋಧನ್ ಎಂಬವರು ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ವೇಳೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಕಾರಿನಲ್ಲಿ ಸುಟ್ಟ ವಾಸನೆ ಬಂದಿದೆ.
ಕೂಡಲೇ ಕೆಳಗಿಳಿದ ಅವರು ನೋಡನೋಡುತ್ತಿದ್ದಂತೆ ಕಾರು ಹೊತ್ತಿಕೊಂಡು ಉರಿದಿದೆ. ಕಾರಿಗೆ ಬೆಂಕಿ ತಗುಲಲು ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗಿದೆ.