alex Certify ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಕೂಡ್ಲಿ ಕ್ರಾಸ್ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ತಂದೆ-ಮಗ ಅಪಾಯದಿಂದ ಪಾರಾಗಿದ್ದಾರೆ.

ಜಗದೀಶ್ ಪಾಟೀಲ್ ಎಂಬವರು ಶುಕ್ರವಾರದ ಅಮಾವಾಸ್ಯೆಯ ಪ್ರಯುಕ್ತ ಪೂಜೆ ಸಲ್ಲಿಸುವ ಸಲುವಾಗಿ ತಮ್ಮ ಪುತ್ರನ ಜೊತೆ ಚನ್ನಗಿರಿ ತಾಲ್ಲೂಕಿನ ಮಾಡಾಳು ಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು.

ಈ ವೇಳೆ ಕಾರಿನ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಕೂಡಲೇ ಕಾರನ್ನು ನಿಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾರಿನ ಒಳಗೆ ಸಂಪೂರ್ಣವಾಗಿ ಹೊಗೆ ಆವರಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆ ಕಾರು ಭಾಗಶಃ ಸುಟ್ಟು ಹೋಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...