ಬೆಂಗಳೂರು: ಒಂದೆಡೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ನಡೆಯುತ್ತಿದ್ದರೆ, ಇನ್ನೊಂದೆಡೆ ಸಿಎಂ ಬಿ ಎಸ್ ವೈ ಪುತ್ರ ವಿಜಯೇಂದ್ರ ಕೆಲ ಮಠಾಧೀಶರನ್ನು ಕರೆದು ಸಭೆ ನಡೆಸುತ್ತಿದ್ದಾರೆ. ಇದು ನಮ್ಮಲ್ಲಿಯೇ ಭಿನ್ನಾಭಿಪ್ರಾಯ ಮೂಡಿಸಲು ಮಾಡುತ್ತಿರುವ ಕುತಂತ್ರ ಎಂದು ವಿಜಯಾನಂದ ಕಾಶಪ್ಪನವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಈಗಗಾಲೇ ಪಾದಯಾತ್ರೆ ನಡೆಯುತ್ತಿದ್ದು, ಫೆ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಹೀಗಿರುವಾಗ ಇಂದು ಕೆಲ ಸ್ವಾಮೀಜಿಗಳನ್ನು ಮಾತ್ರ ಕರೆದು ಸಭೆಯನ್ನು ಆಯೋಜಿಸುತ್ತಿರುವುದು ಏಕೆ? ಇದು ನಮ್ಮ ಹೋರಾಟವನ್ನು ಹತ್ತಿಕ್ಕಲು ಮಾಡುತ್ತಿರುವ ತಂತ್ರವಾಗಿದೆ ಎಂದು ಕಿಡಿಕಾರಿದರು.
ಜನ್ ಧನ್ ಖಾತೆ ಹೊಂದಿ: ಪಡೆಯಿರಿ 2 ಲಕ್ಷ ರೂ. ಅಪಘಾತ ವಿಮೆ
ಅದೇನೇ ಮಾಡಿದರೂ ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೂ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಗುಡುಗಿದ್ದಾರೆ.