ಬೆಂಗಳೂರು: ಪಂಚಮಸಾಲಿ ಸಮುದಾಯದ ಹೋರಾಟ ತೀವ್ರಗೊಂಡ ಬೆನ್ನಲ್ಲೇ ಸಮುದಾಯದ ಸಚಿವರೇ ಇದಕ್ಕೆ ಉತ್ತರ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಎಲ್ಲಾ ಪ್ರಶ್ನೆಗಳಿಗೂ ಸಚಿವರೇ ಉತ್ತರ ಕೊಡುವುದು ಸೂಕ್ತ. ಸಚಿವರಾದ ಸಿ.ಸಿ.ಪಾಟೀಲ್ ಹಾಗೂ ಮುರುಗೇಶ್ ನಿರಾಣಿ ಅವರೇ ಈ ಬಗ್ಗೆ ಉತ್ತರಿಸುತ್ತಾರೆ ಎಂದರು. ಪಂಚಮಸಾಲಿ ಹೋರಾಟದ ಸಮಸ್ಯೆಗೆ ಸಮುದಾಯದ ಸಚಿವರ ಹೆಗಲಿಗೆ ಜವಾಬ್ದಾರಿ ವಹಿಸುವ ಮೂಲಕ ಸಿಎಂ ಜಾಣ್ಮೆಯ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗಿದೆ.
ದೀದಿ ವಿರುದ್ಧ ’ಪಿಶಿ ಜಾವೋ’ ಘೋಷವಾಕ್ಯ ಮೊಳಗಿಸಿದ ಬಿಜೆಪಿ
ಈ ನಡುವೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಮತ್ತೊಂದು ಡೆಡ್ ಲೈನ್ ನೀಡಿದ್ದು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಮಾರ್ಚ್ 4ರ ಗಡುವು ನೀಡಿದ್ದಾರೆ.