ನಾನೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಶಿಸ್ತಿನ ಸಿಪಾಯಿ ಎಂದು ಹೇಳಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಒಂದೊಮ್ಮೆ ಪಕ್ಷ ಹೇಳಿದರೆ ನಾನು ವಿಷ ಕುಡಿಯಲು ಸಿದ್ಧ ಎಂದು ತಿಳಿಸಿದ್ದಾರೆ.
ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಉತ್ತರಿಸುವ ವೇಳೆ ಲಕ್ಷ್ಮಣ ಸವದಿ ಈ ಹೇಳಿಕೆ ನೀಡಿದ್ದಾರೆ.
ಪೊಲೀಸ್ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’
ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ನಾನು ಯಾವುದೇ ಚಿಂತನೆ ನಡೆಸಿಲ್ಲ. ಆದರೆ ಪಕ್ಷ ಸೂಚಿಸಿದರೆ ಕಣಕ್ಕೆ ಇಳಿಯಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.