ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ವೇಳೆ ಈ ಬಾರಿ ಪಟಾಕಿ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಪಟಾಕಿ ಹೊಡೆಯುವವರ ಮೇಲೆ ಬಿಬಿಎಂಪಿ ಹದ್ದಿನ ಕಣ್ಣಿಟ್ಟಿದೆ.
ದೀಪಾವಳಿಯಲ್ಲಿ ಕೇವಲ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ಸರ್ಕಾರದ ನಿಯಮ ಉಲ್ಲಂಘಿಸಿ ಪಟಾಕಿ ಹೊಡೆದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ.
ದೀಪಾವಳಿ ವೇಳೆ ಮಾರ್ಷಲ್ ಗಳು ಬೆಂಗಳೂರು ಸಿಟಿ ರೌಂಡ್ಸ್ ಹಾಕಲಿದ್ದಾರೆ. ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಬಳಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಮನೆ ಮುಂದಿನ ಪಟಾಕಿ ಕಸಗಳನ್ನು ಆಯಾ ಮನೆಯವರೇ ಸ್ವಚ್ಛಗೊಳಿಸಬೇಕು. ಒಟ್ಟಾರೆ ಈ ಬಾರಿ ಕೊರೊನಾ ಹಿನ್ನೆಲೆ ಹಾಗೂ ಆರೋಗ್ಯದ ದೃಷ್ಟಿಯಿಂದ ಪಟಾಕಿ ಬ್ಯಾನ್ ಮಾಡಿರುವ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.