ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಆಯಾ ಪ್ರದೇಶಕ್ಕೆ ಅನುಗುಣವಾಗಿ 3 ಕೆಜಿ ಅಕ್ಕಿಯ ಜೊತೆಗೆ 2ಕೆಜಿ ಜೋಳ ಅಥವಾ 2ಕೆಜಿ ರಾಗಿಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಜುಲೈ ತಿಂಗಳಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಜೋಳ ಹಾಗೂ ಹಳೆ ಮೈಸೂರು ಜಿಲ್ಲೆಗಳಲ್ಲಿ ರಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬಗಳಿಗೆ ಅಕ್ಕಿಯ ಜೊತೆಗೆ ಬೇಳೆಯನ್ನು ನೀಡಲಾಗುತ್ತಿದ್ದು, ಇದೀಗ ಹೆಚ್ಚುವರಿಯಾಗಿ ಜೋಳ ಅಥವಾ ರಾಗಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.