ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯಲು ಪಡಿತರ ಚೀಟಿ ಪ್ರಮುಖವಾಗಿರುತ್ತದೆ. ಆದರೆ ಕೊರೊನಾ ಸಂದರ್ಭದಲ್ಲಿ ತಾಂತ್ರಿಕ ಕಾರಣಗಳಿಂದ ಈ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಇದೀಗ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪುನಃ ಆರಂಭಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕುರಿತಂತೆ ಫೆಬ್ರವರಿ 6ರಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಆದೇಶ ಹೊರಡಿಸಿದ್ದು, ಇದರ ಜೊತೆಗೆ ಪಡಿತರ ಚೀಟಿಯಲ್ಲಿ ಹೆಸರು, ವಿಳಾಸ ತಿದ್ದುಪಡಿ ಮಾಡಲೂ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ.
ವಾಹನ ಚಾಲನಾ ಪರವಾನಿಗೆ ಕುರಿತಂತೆ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ ಸರ್ಕಾರ
ನಾಗರಿಕರು ಪಡಿತರ ಚೀಟಿ ಪಡೆಯಲು ದೇಶದ ಯಾವುದೇ ಮೂಲೆಯಿಂದ ಅರ್ಜಿ ಸಲ್ಲಿಸಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಪಡೆಯಬಹುದಾಗಿದೆ. https://ahara.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ಇ ಸೇವೆಗಳ ಮೇಲೆ ಕ್ಲಿಕ್ ಮಾಡುವ ಮೂಲಕ ವಿವರಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.