alex Certify ಪಡಿತರ ಚೀಟಿ ಹೊಂದಿರುವವರಿಗೆ ಬಿಗ್ ಶಾಕ್: ಅನ್ಯಭಾಗ್ಯ ಅಕ್ಕಿ ವಿತರಣೆಯಲ್ಲಿ ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ಹೊಂದಿರುವವರಿಗೆ ಬಿಗ್ ಶಾಕ್: ಅನ್ಯಭಾಗ್ಯ ಅಕ್ಕಿ ವಿತರಣೆಯಲ್ಲಿ ಕಡಿತ

ಪಡಿತರ ಚೀಟಿ ಹೊಂದಿರುವವರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಈವರೆಗೆ ಪ್ರತಿ ಸದಸ್ಯರಿಗೆ ನೀಡುತ್ತಿದ್ದ 10 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಲಾಗುತ್ತಿದ್ದು, ಇದರ ಜೊತೆಗೆ ಕಡಲೆಕಾಳಿಗೂ ಕೊಕ್ ಬೀಳುವ ಸಾಧ್ಯತೆ ಇದೆ.

ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ತಿಂಗಳಿನಿಂದ ರಾಜ್ಯ ಸರ್ಕಾರ ನೀಡುತ್ತಿದ್ದ ಅನ್ನಭಾಗ್ಯ ಯೋಜನೆಯ 5 ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಇದೀಗ ಕೇಂದ್ರ ಸರ್ಕಾರ ತನ್ನ ಯೋಜನೆಯ ಅಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿದೆ ಎನ್ನಲಾಗಿದೆ.

ಹೀಗಾಗಿ ಡಿಸೆಂಬರ್ ತಿಂಗಳಿನಿಂದ ರಾಜ್ಯದ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿಯ ಬದಲು 5 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. 5 ಕೆಜಿ ಅಕ್ಕಿಯ ಜೊತೆಗೆ 2 ಕೆಜಿ ಗೋಧಿ ಸಹ ನೀಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...